Kornersite

Bengaluru Just In Karnataka Politics State

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಬಂಧನೆಗಳು ಇಲ್ಲಿವೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ (Shakti Scheme) ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಈ ಯೋಜನೆಯಡಿ ರಾಜ್ಯದಲ್ಲಿನ ಎಲ್ಲ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ ಗಳ್ಲಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ‌ ಆದೇಶ ಹೊರಡಿಸಲಾಗಿದ್ದು, ಯೋಜನೆಯಡಿ ವಿಧ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ.

ಮಹಿಳಾ ಪ್ರಯಾಣಿಕರ ಪೈಕಿ 6 ರಿಂದ 12 ವರ್ಷದವರೆಗಿನ ಬಾಲಕಿಯರು, ಲಿಂಗತ್ವ ಅಲ್ಪಅಸಂಖ್ಯಾತರಿಗೂ ಉಚಿತ ಪ್ರಯಾಣ ಮಾಡಬಹುದು. ನಗರ ಸಾರಿಗೆ, ಸಾಮಾನ್ಯ ಮತ್ತು ‌ವೇಗದೂತ ಸಾರಿಗೆಗಳಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ಐಷಾರಾಮಿ ಬಸ್ ಗಳಲ್ಲಿ ಮಹಿಳೆಯರ‌ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ.
ಮಾರ್ಗಸೂಚಿಗಳು ಇಲ್ಲಿವೆ ನೋಡಿ….

  • ಸರ್ಕಾರಿ ಬಸ್ಗಳಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅವಕಾಶ.
  • ಸ್ಮಾರ್ಟ್ಕಾರ್ಡ್ ಪಡೆಯುವವರೆಗೆ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು.
  • ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ತೋರಿಸಿ ಸಂಚಿರಿಸಬಹುದು.
  • ಸರ್ಕಾರದ ಅಂಗವಿಕಲರ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ ಕೂಡ ತೋರಿಸಬಹುದು.
  • ರಾಜಹಂಸ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್, ಐರಾವತ, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಫ್ಲೈ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.
  • ಉಚಿತ ಪ್ರಯಾಣಕ್ಕೆ ದೂರದ ಯಾವುದೇ ಮಿತಿಯಿಲ್ಲ.
  • ರಾಜ್ಯದೊಳಗೆ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಂತಾರಾಜ್ಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ
  • ನಿಗದಿಗಿಂತ ಹೆಚ್ಚಿನ ಪ್ರಮಾಣದ ಲಗೇಜ್ ಎಂದಿನಂತೆ ಟಿಕೆಟ್ ಪಡೆಯಬೇಕು.
  • ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ ಶಕ್ತಿ ಸ್ಮಾರ್ಟ್ಕಾರ್ಡ್ ಪಡೆಯಬಹುದು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು