Kornersite

Just In Sports

ಈ ಪಾಕ್ ಬೌಲರ್ ಗೆ ವಿರಾಟ್ ಕೊಹ್ಲಿಯದ್ದೇ ಚಿಂತೆ; ಏನು ಗೊತ್ತಾ?

ಪಾಕಿಸ್ತಾನದ ಯುವ ವೇಗಿ ನಸೀಮ್ ಶಾ ಅಲ್ಪಾವಧಿಯಲ್ಲಿಯೇ ಮೂರು ಸ್ವರೂಪಗಳಲ್ಲಿಯೂ ಪಾಕಿಸ್ತಾನ ತಂಡದ ಖಾಯಂ ಸದಸ್ಯರಾಗಿದ್ದಾರೆ.
140 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ನಸೀಮ್, ಸಂದರ್ಶನವೊಂದರಲ್ಲಿ ಮಾತನಾಡಿ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದೇ ನನ್ನ ಅತೀ ದೊಡ್ಡ ಕನಸು ಎಂದು ಹೇಳಿದ್ದಾರೆ.

ಭಾರತದ ವಿರುದ್ಧ ಆಡುವಾಗ ನಾನು ಪ್ರಾಣವನ್ನೇ ಪಣಕ್ಕಿಟ್ಟು ಆಡುತ್ತೇನೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯ ವಿಕೆಟ್ ಪಡೆಯುವುದೇ ನಮ್ಮೆಲ್ಲರ ಗುರಿಯಾಗಿರುತ್ತದೆ. ಅದರಲ್ಲೂ ಅವರನ್ನು ಶೂನ್ಯಕ್ಕೆ ಔಟ್ ಮಾಡಬೇಕೆಂಬುದು ನನ್ನ ಬಹು ದೊಡ್ಡ ಕನಸು.
ರೆ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದು ಹೆಮ್ಮೆಯ ವಿಷಯವಾಗಿರುತ್ತದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಮುಂದಿನ ದಿನಗಳಲ್ಲಿ ಡಕ್ ಔಟ್ ಮಾಡಬೇಕೆಂದಿರುವೆ ಎಂದು ನಸೀಮ್ ಶಾ ಹೇಳಿದ್ದಾರೆ.

ಮುಂಬರುವ ಏಷ್ಯಾಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇದಲ್ಲದೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲೂ ಸಾಂಪ್ರದಾಯಿಕ ಎದುರಾಳಿಗಳು ಸೆಣಸಲಿವೆ. ಆಗ ಕೊಹ್ಲಿ ವಿಕೆಟ್ ಪಡೆಯುತ್ತಾರೆಯೇ ಕಾಯ್ದು ನೋಡಬೇಕಿದೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್