Kornersite

Bollywood Entertainment Just In Mix Masala Sandalwood

ಟೈಟಲ್ ಹುಳು ಬಿಟ್ಟ ಉಪ್ಪಿ; ಉಪ್ಪಿ ಹೊಸ ಸಿನಿಮಾ “UI” ವಿಶೇಷತೆ ಏನು?

ಉಪ್ಪಿ ನಿರ್ದೇಶನದ ಸಿನಿಮಾ ಈಗ ವಿಶ್ವ ಪರ್ಯಟನೆಗೆ ಸಜ್ಜಾಗಿದೆ. ಉಪ್ಪಿ ನಿರ್ದೇಶನ ಮಾಡಿ, ನಟಿಸುತ್ತಿರುವ ಯುಐ (UI), ಟೈಟಲ್ ಕೇಳಿಯೇ ಅಭಿಮಾನಿಗಳು ಹಾಗೂ ಚಿತ್ರ ರಸಿಕರು ತಲೆ ಕೆಡಿಸಿಕೊಂಡಿದ್ದಾರೆ. ಈ ಚಿತ್ರ ಏನು ಸ್ಪೆಶಾಲಿಟಿ ಹೊಂದಿದೆ? ಇದನ್ನು ಗ್ಲೋಬಲ್ ಸಿನಿಮಾ ಎಂದು ರಿಯಲ್ ಸ್ಟಾರ್ ಹೇಳಿದ್ದೇಕೆ?

ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಹಲವಾರು ಗ್ರೇಟ್ ಸ್ಪೆಶಾಲಿಟಿಗಳಿವೆ ಎನ್ನಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿ ಎನ್ನುವಂಥ ವಿಷಯ ಹಾಗೂ ತಾಂತ್ರಿಕ ಕೆಲಸಗಳಿವೆ. ಅದಕ್ಕಾಗಿಯೇ ಬೆಂಗಳೂರು ಸಮೀಪ ಹತ್ತು ಎಕರೆ ಜಾಗದಲ್ಲಿ ಹಿಂದೆಂದೂ ಕಾಣದಂಥ ಸೆಟ್ ಹಾಕಲಾಗಿದೆ.

ಉಪ್ಪಿ ನಿರ್ದೇಶನ ಅಂದರೆ ಅಲ್ಲಿ ಗ್ರಾಫಿಕ್ಸ್ ಗೆ ಕೆಲಸ ಅಷ್ಟೇನೂ ಇರುತ್ತಿರಲಿಲ್ಲ. ಆದರೆ ಈ ಬಾರಿ ಉಪ್ಪಿ ಹಳೇ ಸ್ಟೈಲ್ ಮರೆತು ಅತ್ಯದ್ಭುತ ತಂತ್ರಜ್ಞಾನಕ್ಕೆ ಕೈ ಹಾಕಿದ್ದಾರೆ. ಕಂಪ್ಯೂಟರೈಸ್ಡ್ ಕ್ಯಾಮೆರಾ ಬಳಸುತ್ತಿದ್ದಾರೆ. ವರ್ಚುವಲ್ ಗ್ರಾಫಿಕ್ಸ್ ಕೂಡ ಕೆಲಸ ಮಾಡಲಿದೆ. ಕೆಲವೊಂದು ತಾಂತ್ರಿಕ ವಿಷಯ ಈಗ ಅರ್ಥವಾಗುವುದಿಲ್ಲ. ಅದನ್ನು ಸಿನಿಮಾ ನೋಡಿದ ಮೇಲೆಯೇ ಅನುಭವಿಸಬೇಕು. ಈ ಹೊಸ ತಂತ್ರಜ್ಞಾನಕ್ಕೆ ನಿರ್ಮಾಪಕರಲ್ಲಿ ಒಬ್ಬರಾದ ನವೀನ್ ಮನೋಹರ್ ನಾಯ್ಡು ಬರೀ ಹೆಗಲು ಕೊಟ್ಟಿಲ್ಲ ಜೀವವನ್ನೇ ತೇಯುತ್ತಿದ್ದಾರೆ. ಉಪ್ಪಿ ಇದಕ್ಕೆ ಹೆಮ್ಮೆ ಪಡುತ್ತಾರೆ.

ಇದನ್ನು ಗ್ಲೋಬಲ್ ಸಿನಿಮಾ’ ಎನ್ನುತ್ತಾರೆ ಉಪ್ಪಿ. ಯಾರೇ ನೋಡಿದರೂ ಇದನ್ನು ಒಪ್ಪಿಕೊಳ್ಳಬೇಕು. ಮನಸಿಗೆ ಸಂಬಂಧಿಸಿದ ವಿಷಯ ಹೆಣೆಯುತ್ತಿದ್ದ ಉಪ್ಪಿ ಈ ಬಾರಿಯೂ ಹಾಗೆಯೇ ಮಾಡಿರುತ್ತಾರೆ. ಆದರೆ ವಿಷಯ ಮಾತ್ರ ಇಡೀ ವಿಶ್ವಕ್ಕೆ ಮೆಚ್ಚುಗೆಯಾಗುತ್ತದೆ ಎನ್ನುವುದು ಇವರ ನಂಬಿಕೆ. ಅದ್ಭುತ ತಂಡವನ್ನು ಕಟ್ಟಿಕೊಂಡು ಉಪ್ಪಿ ಹೊಸ ಯುದ್ಧಕ್ಕೆ ಸಜ್ಜಾಗಿದ್ದಾರೆ. ಎಲ್ಲರೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ