Kornersite

Just In National

Train Accident: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ; 6 ಜನ ಸಾವು!

ಭುವನೇಶ್ವರ: ಒಡಿಶಾದಲ್ಲಿನ ಬಾಲಸೋರ್ ಭೀಕರ ರೈಲು ಅಪಘಾತದ (Odisha Train Accident) ಕಹಿ ಮರೆಯುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಹತ್ತಿರ ಗೂಡ್ಸ್ ರೈಲಿನಡಿ ಸಿಲುಕಿ 6 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ಈ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದರು. ಅಷ್ಟರಲ್ಲಿ ರೈಲು ಚಲಿಸಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸರಣಿ ರೈಲು ಅಪಘಾತ ಸಂಭವಿಸಿದ 5 ದಿನಗಳ ನಂತರ ಈ ಘಟನೆ ನಡೆದಿದೆ.

ಕಾರ್ಮಿಕರು ಸಮೀಪದಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಭಾರೀ ಮಳೆ ಪ್ರಾರಂಭವಾಯಿತು. ಮಳೆಯಿಂದ ರಕ್ಷಣೆ ಪಡೆಯಲು, ಗೂಡ್ಸ್ ರೈಲಿನ ಬಿಡ್ ಅಡಿ ಆಶ್ರಯ ಪಡೆದಿದ್ದಾರೆ. ಕೂಲಿ ಕಾರ್ಮಿಕರು ರೈಲಿನ ಬೋಗಿಯ ಕೆಳಗೆ ಕುಳಿತಿದ್ದ ಅದೇ ಸಮಯಕ್ಕೆ ರೈಲು ಮತ್ತೆ ಸಂಚರಿಸಲು ಆರಂಭಿಸಿತು. ಇದರಿಂದ 6 ಜನ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಇನ್ನು ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಒಡಿಶಾದ ಬಾಲಸೋರ್‌ನಲ್ಲಿ ಕಳೆದ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲು ಮತ್ತು ಯಶವಂತಪುರ-ಹೌರಾ ರೈಲು ಡಿಕ್ಕಿ ಹೊಡೆದ ಪರಿಣಾಮ 288 ಜನರು ಸಾವನ್ನಪ್ಪಿದ್ದು, ಸಾವಿರಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ