Kornersite

Bengaluru Just In Karnataka Politics State

Free Bus Ticket For Women: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಜ್ಯ; ಚಾಲನೆ ನೀಡಲಿರುವ ಸಿಎಂ!

ಬೆಂಗಳೂರು : ಇಂದಿನಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆ ಇಂದಿನಿಂದ ಲಭ್ಯವಾಗಲಿದೆ. ಈ ಉಚಿತ ಬಸ್ (Free Bus Ticket For Women) ಪ್ರಯಾಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ರಾಜ್ಯಾದ್ಯಂತ ಮಹಿಳಾ ಮಣಿಗಳಿಗೆ ಇಂದಿನಿಂದ ಉಚಿತ ಬಸ್ ಪ್ರಯಾಣ, ಎಲ್ಲಿ ಬೇಕಾದರೂ ಸಂಚಾರ ಮಾಡಬಹುದಾಗಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಪೈಕಿ ಮೊದಲ ಯೋಜನೆಯಾದ ಮಹಿಳೆಯರಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡುವ ಶಕ್ತಿ ಯೋಜನೆಗೆ ಇಂದು ಬೆಳಗ್ಗೆ 11ಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಅಲ್ಲದೇ, ಸ್ಮಾರ್ಟ್‍ಕಾರ್ಡ್, ಲೋಗೋ ಅನಾವರಣ ಆಗಲಿದೆ. ಈ ಕಾರ್ಯಕ್ರಮ ಜಾರಿಯಾಗುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ವತಃ ಸಿದ್ದರಾಮಯ್ಯನವರೇ ಸಿಎಂ ಸಿದ್ದರಾಮಯ್ಯ ಮೊದಲ ಶೂನ್ಯ ಟಿಕೆಟ್ ವಿತರಣೆ ಮಾಡಲಿದ್ದಾರೆ.

ವಿಧಾನಸೌಧದಲ್ಲಿ ಶಜ್ತಿ ಯೋಜನೆಗೆ ಚಾಲನೆ ಕೊಟ್ಟ ನಂತರ ಮುಖ್ಯಮಂತ್ರಿ ಮತ್ತು ಟೀಂ ಬಿಎಂಟಿಸಿ ಬಸ್‍ನಲ್ಲಿ ಮೆಜೆಸ್ಟಿಕ್‍ಗೆ ಪ್ರಯಾಣ ಬೆಳೆಸಲಿದ್ದಾರೆ. ಮೆಜೆಸ್ಟಿಕ್‍ನ ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ದೂರದ ಊರುಗಳಿಗೆ ತೆರಳುವ ಬಸ್‍ಗಳಿಗೆ ಚಾಲನೆ ನೀಡಲಿದ್ದಾರೆ. ಆ ನಂತರ ಮತ್ತೆ ಮೆಜಿಸ್ಟಿಕ್ ನಿಂದ ವಿಧಾನಸೌಧಕ್ಕೆ ಮರಳಲಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು