Kornersite

Crime Just In National

ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ಹೋಗಿ ಬಾವಿಗೆ ಬಿದ್ದ ಯುವಕ; ಮುಂದೇನಾಯ್ತು?

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆಯೊಂದು ಮಹಾರಾಷ್ಟ್ರದ ದೊಂಬಿವ್ಲಿಯ ಠಾಕುರ್ಲಿ ಪ್ರದೇಶದಲ್ಲಿ ನಡೆದಿದೆ.

ಯುವಕನೊಬ್ಬ ತನ್ನ ಸ್ನೇಹಿತರ ಜೊತೆಗೆ ರೀಲ್ಸ್ ಮಾಡಲು ತೆರಳಿ ಆಯತಪ್ಪಿ ಬ್ರಿಟಿಷರ ಕಾಲದ ಪಂಪ್ ಹೌಸ್‌ ನ ಬಾವಿಯಲ್ಲಿ ಮುಳುಗಿ ಬಿದ್ದು ಸಾವನ್ನಪ್ಪಿದ್ದಾನೆ. ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ತೆರಳಿದ್ದ ಎನ್ನಲಾಗಿದೆ.

ಸತತ 32 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ವ್ಯಕ್ತಿಯ ಮೃತದೇಹವನ್ನು ಹುಡುಕಲಾಗಿದೆ. 18 ವರ್ಷದ ಬಿಲಾಲ್ ಸೊಹೈಲ್ ಶೇಖ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ, ಬಿಲಾಲ್ ಬಾವಿಗೆ ಬೀಳುವುದನ್ನು ನೋಡಿದ ಇಬ್ಬರು ಸ್ನೇಹಿತರು ಸಹಾಯಕ್ಕಾಗಿ ಭದ್ರತಾ ಸಿಬ್ಬಂದಿಯ ಮೊರೆ ಹೋಗಿದ್ದರು. ನಂತರ ವಿಷ್ಣು ನಗರ ಠಾಣೆಗೆ ಸಿಬ್ಬಂದಿ ಮಾಹಿತಿ ನೀಡಿದ್ದರು.

ಮುಂಬ್ರಾದ ಚಂದನಗರದ ನಿವಾಸಿಗಳಾದ ಮೂವರು ಸ್ನೇಹಿತರು ಕುಡಿದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ. ಶವಕ್ಕಾಗಿ ಒಂದು ದಿನಕ್ಕೂ ಹೆಚ್ಚು ಕಾಲ ಶೋಧ ನಡೆಸಲಾಗಿತ್ತು. ಘಟನೆ ನಡೆದ 32 ಗಂಟೆಗಳ ನಂತರ ಶವ ಪತ್ತೆಯಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ