ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರೈತರು ಸಂತಸ ಪಡುವ ಸಂಗತಿಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಜೂನ್ 19ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವಾರ ಪೂರ್ತಿ ಚಂಡಮಾರುತದ ಹಾವಳಿ ಕಂಡು ಬರುವ ಸಾಧ್ಯತೆ ಇದೆ. ಹೀಗಾಗಿ ನಿತ್ಯ ಸಂಜೆ ಮಳೆ ಬರಲಿದೆ. ಬಿಪರ್‌ಜಾಯ್ ಚಂಡಮಾರುತ ತೀವ್ರತೆ ಕಡಿಮೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಇಡೀ ದಿನ ಆವರಿಸುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.