‘ಆದಿಪುರುಷ್’ ಚಿತ್ರ (Adipurush Movie) ಆರಂಭದಿಂದಲೂ ಭಾರೀ ಸದ್ದು ಮಾಡುತ್ತಿತ್ತು. ಹೀಗಾಗಿ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾಯುತ್ತಿದ್ದರು. ಸದ್ಯ ಚಿತ್ರ ಬಿಡುಗಡೆಯಾಗಿದೆ. ಇಂದು (ಜೂನ್ 16) ಅದ್ದೂರಿಯಾಗಿ ‘ಆದಿಪುರುಷ್’ ತೆರೆಕಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್ (Prabhas), ಕೃತಿ ಸನೋನ್, ದೇವದತ್ತ ನಾಗೆ, ಸೈಫ್ ಅಲಿ ಖಾನ್, ಸನ್ನಿ ಸಿಂಗ್ ಸೇರಿದಂತೆ ಹಲವರು ನಟಿಸಿದ್ದಾರೆ.
ಓಂ ರಾವತ್ (Om Raut) ನಿರ್ದೇಶನದಲ್ಲಿ ‘ಆದಿಪುರುಷ್’ ಚಿತ್ರ ಮೂಡಿ ಬಂದಿದೆ. ನೂರಾರು ಕೋಟಿ ರೂ. ಬಜೆಟ್ನಲ್ಲಿ ಈ ಸಿನಿಮಾ ರೂಪ ತಾಳಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ಪ್ರದರ್ಶನ ಆಗುತ್ತಿದೆ. ಬೆಳಿಗ್ಗೆ 6ಕ್ಕೂ ಮೊದಲೇ ಸಿನಿಮಾ ಬಿಡುಗಡೆಯಾಗಿದೆ. ರಾಮಾಯಣವನ್ನು ಆಧರಿಸಿದ ‘ಆದಿಪುರುಷ್’ ಚಿತ್ರ 3ಡಿಯಲ್ಲಿ ಮೂಡಿಬಂದಿದೆ. ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ಟೀಸರ್ ಬಿಡುಗಡೆ ಆದಾಗ ಈ ಸಿನಿಮಾ ಸಖತ್ ಟ್ರೋಲ್ ಆಗಿತ್ತು. ಸದ್ಯ ಚಿತ್ರ ಬಿಡುಗಡೆಯಾಗಿದ್ದು, ಚಿತ್ರ ರಸಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ.