ಬೆಂಗಳೂರು: ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಬರೋಬ್ಬರಿ 11 ವರ್ಷವೇ ಕಳೆದಿದೆ. ಇದೀಗ ಬೆಂಗಳೂರಿನ ಸಿಬಿಐ ಕೋರ್ಟ್ ಹನ್ನೊಂದು ವರ್ಷಗಳ ನಂತರ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಯನ್ನ ಖುಲಾಸೆ ಮಾಡಿದೆ. ಆರೋಪಿ ಸಂತೋಷ ರಾವ್ ವಿರುದ್ದ ಸಲ್ಲಿಕೆ ಮಾಡಿದ್ದ ಸಾಕ್ಷಾಧಾರ ಕೊರತೆ ಇದೆ ಎನ್ನುವ ಕಾರಣಕ್ಕಾಗಿ ನ್ಯಾಯಾಲಯ ದೋಷಮುಕ್ತ ಮಾಡಿದೆ.
ಹನ್ನೊಂದು ವರ್ಷಗಳ ಹಿಂದೆ ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನ ಅಪಹರಿಸಿ ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಲಾಗಿತ್ತು. 2012ರ ಅಕ್ಟೋಬರ್ 10 ರಂದ ಸೌಜನ್ಯಾಳ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎನ್ನುವವನನ್ನ ಪೊಲೀಸರು ಬಂಧಿಸಿದ್ದರು. ಆದರೆ ಈ ಬಗ್ಗೆ ಸರಿಯಾದ ತನಿಖೆ ಆಗಿಲ್ಲ ಎನ್ನುವ ಆರೋಪ ಕೇಳಿ ಬಂದಿತ್ತು.
ಹೀಗಾಗಿ ಹಲವು ವರ್ಷಗಳ ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಸುದೀರ್ಘ ವಿಚಾರಣೆಯ ನಂತರ ಇದೀಗ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದೆ.