ರಾಜ್ಯದ ಹಲವ ಜಿಲ್ಲೆಗಳಲ್ಲಿ ಜೂನ್ 20ರ ವರೆಗೆ ಭರ್ಜರಿ ಮಲೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಬಿಪೋರ್ಜಾಯ್ ಚಂಡಮಾರುತ 125 ಕಿ.ಮೀ ವೇಗದಲ್ಲಿ ಗುಜರಾತ್ ಕರಾವಳಿಗೆ ಅಪ್ಪಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಪ್ರಬಲ ಚಂಡಮಾರುತ ಅಪ್ಪಳಿಸಿದ ನಂತರ ರಾಜ್ಯದ ಪರಿಸ್ಥಿತಿಯ ಕುರಿತು ಮಾತನಾಡಿದ್ದಾರೆ.