Kornersite

Bengaluru Crime Karnataka Politics State

ಭ್ರಷ್ಟಾಚಾರ; 11 ಅಧಿಕಾರಿಗಳು ಅಮಾನತು; ಬರೋಬ್ಬರಿ 250 ಕೋಟಿ ರೂ. ಗುಳುಂ ಮಾಡಿರುವ ಆರೋಪ!

ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್ ಪಾವತಿ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಆರ್ಆರ್ ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ ಇಂಜಿನಿಯರ್ ದೊಡ್ಡಯ್ಯ ಸೇರಿದಂತೆ 11 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅವರಿಂದ 11 ಮಂದಿಯ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯ ಇಂಜಿನಿಯರ್ ಟಿವಿಸಿಸಿ ವಿಭಾಗ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಮುಖ್ಯ ಇಂಜಿನಿಯರ್ ವಿಜಯಕುಮಾರ್, ಸಹಾಯಕ ಇಂಜಿನಿಯರ್ ಶಿಲ್ಪಾ, ಯೋಜನಾ ವಿಭಾಗದ ಮುಖ್ಯ ಇಂಜಿನಿಯರ್ ಮೋಹನ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭಾರತ, ಕಾರ್ಯಪಾಲಕ ಇಂಜಿನಿಯರ್ ಬಸವರಾಜ, ಸಹಾಯಕ ಇಂಜಿನಿಯರ್ ಸಿದ್ದಯ್ಯ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉಮೇಶ್, ಸೂಪರಿಂಟೆಂಡೆಂಟ್ ಅನಿತಾ, ಡೆಪ್ಯುಟಿ ಮ್ಯಾನೇಜರ್ ಗೂಳಿಗೌಡ ಅಮಾನತಾಗಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು