ಮೈಸೂರು: ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಕೇಂದ್ರ ಸರ್ಕಾರ ನಕಾರ ವಿಚಾರ ಕುರಿತಾಗಿ ಡ್ಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ವಿಮಾನನಿಲ್ದಾಣದಲ್ಲಿ ಮಾತನಾಡಿದ ಅವರು, ಅವರೇನು ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ. ನಾವೇನು ಪುಕ್ಸಟ್ಟೆ ಕೊಡಿ ಅಂತ ಕೇಳಿಲ್ಲ. ಬರುವ ಜುಲೈ ಒಂದರಂದು ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ನಮಗೆ ಅಕ್ಕಿ ಕೊಡಬೇಕಾಗುತ್ತೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಪತ್ರ ಬರೆದಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಛತ್ತಿಸ್ ಗಡ್, ತೆಲಂಗಾಣ ಸೇರಿದಂತೆ ವಿವಿಧ ರಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಮುಂದಿನ ರೂಪುರೇಷಗಳ ಬಗ್ಗೆ ಶುಕ್ರವಾರ ಮಾತನಾಡುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿ ಮಾಡಬೇಕೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು ಬೇರೆ ಬೇರೆ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿ ಮಾಡಬೇಕು. ಯಾರ ಬಳಿಯೂ ಬೆರಳು ಮಾಡಿ ತೊರಿಸಿಕೊಳ್ಳುವ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾದುವುದು ಸರಿಯಲ್ಲ್. ಕೇಂದ್ರದ ನಿಲುವು ಸರಿಯಲ್ಲ ಎಂದು ಖಂಡಿಸಿದ್ದಾರೆ ಡಿಕೆಶಿ.