Kornersite

Just In Maharashtra National Politics Uttar Pradesh

ನೆಹರು ಮ್ಯೂಸಿಯಂ ಹೆಸರು ಬದಲಾವಣೆ; ಕಾಂಗ್ರೆಸ್ ನಿಂದ ತೀವ್ರ ವಾಗ್ದಾಳಿ!

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಹೆಸರುಗಳ ಮರುನಾಮಕರಣ ರಾಜಕೀಯ ಮುಂದುವರಿದಿದ್ದು, ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ.

ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ (ಎನ್‍ಎಂಎಂಎಲ್) ವಿಶೇಷ ಸಭೆಯಲ್ಲಿ ಹೆಸರು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಶುಕ್ರವಾರ ಹೇಳಿದೆ.ದೆಹಲಿಯ ನೆಹರೂ ಮೆಮೋರಿಯಲ್ ಮ್ಯೂಸಿಯಂ ಆ್ಯಂಡ್ ಲೈಬ್ರರಿ (Nehru Memorial Museum & Library) ಹೆಸರನ್ನು ಪ್ರಧಾನಮಂತ್ರಿ ಮ್ಯೂಸಿಯಂ ಅಂಡ್ ಸೊಸೈಟಿ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಸೊಸೈಟಿಯ ಅಧ್ಯಕ್ಷರಾಗಿದ್ದಾರೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ (Rajnath Singh) ಮಾತನಾಡಿ, ಹೆಸರಿನ ಬದಲಾವಣೆಯ ಪ್ರಸ್ತಾಪವನ್ನು ಸ್ವಾಗತಿಸಿದರು. ಪ್ರಧಾನ ಮಂತ್ರಿಗಳು ಒಂದು ಸಂಸ್ಥೆ ಇದ್ದ ಹಾಗೆ, ಕಾಮನಬಿಲ್ಲಿನ ಎಲ್ಲಾ ಬಣ್ಣಗಳನ್ನು ಸುಂದರವಾಗಿಸಲು ಪ್ರಮಾಣಾನುಗುಣವಾಗಿ ಪ್ರತಿನಿಧಿಸಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಕಾಂಗ್ರೆಸ್ (Congress) ಗರಂ ಆಗಿದೆ. ಸಣ್ಣತನ, ಸೇಡಿನ ಪ್ರತಿರೂಪವೇ ನರೇಂದ್ರ ಮೋದಿ. ಕಳೆದ 59 ವರ್ಷದಿಂದ ಎನ್‍ಎಂಎಂಎಲ್ ಜಾಗತಿಕ ಮಟ್ಟದಲ್ಲಿ ಬೌದ್ಧಿಕತೆಯ ಹೆಗ್ಗುರುತಾಗಿದೆ. ನವಭಾರತದ ನಿರ್ಮಾತೃ ನೆಹರೂ ಹೆಸರಿಗೆ, ಹೆಗ್ಗಳಿಕೆಗೆ ಧಕ್ಕೆ ತರಲು ಮೋದಿ ಎಲ್ಲವನ್ನು ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು