ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿನ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿತ್ತು. ಹೀಗಾಗಿ ಇಂದಿನಿಂದ ಈ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ.
ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದರು. ಆದರೆ, ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಲಿದೆ. ಹೀಗಾಗಿ ಇಂದಿನಿಂದ ಯೋಜನೆಗೆ ಚಾಲನೆ ನೀಡಲಾಗಿದೆ.
ಕರ್ನಾಟಕ ವಿಧಾನಸಭಾ ಚುನವಾಣೆ ವೇಳೆ ಕಾಂಗ್ರೆಸ್ ಕೊಟ್ಟ 5 ಗ್ಯಾರಂಟಿಗಳಲ್ಲಿ 200 ಯೂನಿಟ್ ಉಚಿತವಾಗಿ ನೀಡುವ ಗ್ಯಾರಂಟಿಯೂ ಕೂಡ ಮಹತ್ವದ್ದಾಗಿದೆ.