ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಇದಾದ ನಂತರವೂ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ, ಎಲ್ಲಾ ಕೈಗಾರಿಕೆಗಳನ್ನು ಬಂದ್ ಮಾಡೋದಾಗಿ ಎಚ್ಚರಿಗೆ ನೀಡಿತ್ತು.
ಕಳೆದ ಎಂಟು ದಿನಗಳಿಂದ ವಿದ್ಯೂತ್ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನ ಹಾಗೂ ಕೈಗಾರಿಕೆಗಳ ಮೇಲೆ ಆಗುವ ಪರಿಣಾಮಗಳ ಕುರಿತು ಸರ್ಕಾರಕ್ಕೆ ಗಂಭೀರತೆ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಧಿಕಾರಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ.

