ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸುಗುಣ(26), ಮಕ್ಕಳಾದ ಪ್ರೀತಂಗೌಡ(9) ಹಾಗೂ ನಿಶಿತಾ ಗೌಡ ಎಂದು ಗುರುತಿಸಲಾಗಿದೆ. ಆದರೆ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಗುಣ ಅವರು ಕಳೆದ 10 ವರ್ಷಗಳ ಹಿಂದೆ ಮುರುಳಿ ಎಂಬುವವರನ್ನು ವಿವಾಹವಾಗಿದ್ದರು. ಇಬ್ಬರೂ ಸರ್ಕಾರಿ ಬಸ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು. ಮುರುಳಿ ಸರ್ಕಾರಿ ಬಸ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರೆ, ಸುಗುಣ ಮೆಕಾನಿಕ್ ಕೆಲಸ ಮಾಡುತ್ತಿದ್ದರು.
ಆದರೆ, ಸುಗುಣ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.