ಕರ್ನಾಟಕ ಸಾರಿಗೆ ಇಲಾಖೆ ನಿನ್ನೆಯಷ್ಟೇ ಉಚಿತವಾಗಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಕುರಿತು ಅಪಹಾಸ್ಯ ಮಾಡುವುದು ಸೇರಿದಂತೆ ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳಬಾರದೆಂದು ಸುತ್ತೋಲೆ ಹೊರಡಿಸಿದೆ.
ಇದರ ಬೆನ್ನಲ್ಲಿಯೇ ಕಂಡೆಕ್ಟರ್ ಒಬ್ಬರು ವೃದ್ಧೆಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಮಹಿಳಾ ಕಂಡಕ್ಟರ್ ಒಬ್ಬರು ವೃದ್ದೆಗೆ ಕಪಾಳಮೋಕ್ಷ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಬಸ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭದಲ್ಲಿ ಮಹಿಳಾ ಕಂಡಕ್ಟರ್, ಅಜ್ಜಿಯ ಕಪಾಳಕ್ಕೆ ಹೊಡೆದಿದ್ದಾರೆ. ತನ್ನ ಅಜ್ಜಿಯ ವಯಸ್ಸಿನ ಮಹಿಳೆಯ ಮೇಲೆ ಈ ರೀತಿ ಹಲ್ಲೆ ಮಾಡಿರುವ ಮಹಿಳಾ ನಿರ್ವಹರು ನಡೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.