ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಹಲವು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ಹೊರಡಿಸಿದೆ.
ನೇಮಕಾತಿ ಅಡಿಯಲ್ಲಿ ಫೀಲ್ಡ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾದವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB)ಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಒಟ್ಟು 186 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಾದರೂ ಕೆಲಸಕ್ಕೆ ನಿಯೋಜಿಸಬಹುದು. ಎಸ್ ಡಿಎ, ಫೀಲ್ಡ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಲದೇ, 12 ಕಲ್ಯಾಣ ಅಧಿಕಾರಿಗಳು ಹಾಗೂ 60 ಕ್ಷೇತ್ರ ನಿರೀಕ್ಷಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆನ್‌ಲೈನ್‌ನಲ್ಲಿ ಜೂನ್ 23 ರಿಂದ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜುಲೈ 25ರ ವರೆಗೆ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್: karbwwb.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.