ಭಾರತ ಕ್ರಿಕೆಟ್ ತಂಡವು ಮಹೇಂದ್ರಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷಗಳು ಕಳೆದಿವೆ. ಈ ಸಮಯವನ್ನು ಇಡೀ ಭಾರತವೇ ಮೆಲಕು ಹಾಕಿ ಸಂತಸ ಪಡುತ್ತಿದೆ.
2013ರ ಜೂನ್ 23ರಂದು ಬ್ರಿಟನ್ನ ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನೆನಪುಗಳನ್ನು ಮೆಲಕು ಹಾಕುತ್ತಿದ್ದಾರೆ. ಕೂಲ್ ಕ್ಯಾಪ್ಟನ್ ಧೋನಿ ನಾಯಕತ್ವದ ಟೀಮ್ ಇಂಡಿಯಾ ಆಟಗಾರರ ಆಟವನ್ನು ಅಭಿಮಾನಿಗಳು ಗುಣಗಾನ ಮಾಡುತ್ತಿದ್ದಾರೆ.
ಈ ಪಂದ್ಯದಲ್ಲಿ ಭಾರತ ತಂಡವು 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ್ದ ಇಂಗ್ಲೆಂಡ್ ತಂಡವು 8 ವಿಕೆಟ್ ಕಳೆದುಕೊಂಡು 124 ರನ್ ಗಳಿಸಿ 5 ರನ್ ಅಂತರದಿಂದ ಸೋಲು ಕಂಡಿತ್ತು. ಈ ಪಂದ್ಯಕ್ಕೆ ಮಳೆಯ ಕಾಟ ದೊಡ್ಡದಾಗಿತ್ತು. ಹೀಗಾಗಿ ಪಂದ್ಯವು 6 ಗಂಟೆಗಳ ವಿಳಂಬವಾಗಿತ್ತು. ಹೀಗಾಗಿ ಪಂದ್ಯವನ್ನು 20 ಓವರ್ ಗಳಿಗೆ ಸೀಮಿತಗೊಳಿಸಿ ಆಡಿಸಲಾಗಿತ್ತು.