Kornersite

International Just In Politics

ಅಮೆರಿಕದಲ್ಲಿ ಐತಿಹಾಸಿಕ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ!

ಪ್ರಜಾಪ್ರಭುತ್ವವು ಎರಡು ದೇಶಗಳ ಪವಿತ್ರ ಬಾಂಧವ್ಯಗಳಲ್ಲಿ ಒಂದಾಗಿದ್ದು, ಘನತೆ ಹಾಗೂ ಸಮಾನತೆ ಬೆಂಬಲಿಸಲು ಪ್ರಜಾಪ್ರಭುತ್ವವೊಂದೇ ದಾರಿ. ಭಾರತವು ಪ್ರಜಾಪ್ರಭುತ್ವದ ತಾಯಿ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

ಆಧುನಿಕ ಭಾರತದಲ್ಲಿ ಮಹಿಳೆಯರು ನಮ್ಮನ್ನು ಉತ್ತಮ ಭವಿಷ್ಯದತ್ತ ಕೊಂಡೊಯ್ಯುತ್ತಿದ್ದಾರೆ. ಮಹಿಳೆಯರಿಗೆ ಅನುಕೂಲವಾಗುವ ಅಭಿವೃದ್ಧಿಯಲ್ಲ, ಇದು ಮಹಿಳಾ ನೇತೃತ್ವದ ಅಭಿವೃದ್ಧಿ ಎಂದರು. ಆರ್ಥಿಕತೆಯನ್ನು ನಗದು ರಹಿತವಾಗಿಸಲು ಭಾರತ ಡಿಜಿಟಲ್ ಕ್ರಾಂತಿ ಮಾಡಿದೆ. ಭಾರತದಲ್ಲಿ ಕೋಟ್ಯಂತರ ಜನರು ಯುಪಿಐ ಮೂಲಕ ತಮ್ಮ ವಹಿವಾಟಗಳನ್ನು ಮಾಡುತ್ತಿದ್ದಾರೆ. ಇದು ಇದು ಆರ್ಥಿಕತೆಯಲ್ಲಿ ಪಾರದರ್ಶಕತೆಯನ್ನು ತಂದಿದೆ, ಭ್ರಷ್ಟಾಚಾರವನ್ನು ಕೂಡ ಕಡಿಮೆ ಮಾಡಲಾಗಿದೆ ಎಂದರು.

ಅಮೆರಿಕ ಹಾಗೂ ಭಾರತವು ವಿಶ್ವದ ಎರಡು ದೊಡ್ಡ ಪ್ರಜಾಪ್ರಭುತ್ವ ಶಕ್ತಿಗಳಾಗಿವೆ. ಜತೆಗೂಡಿದರೆ ಇಡೀ ಜಗತ್ತಿಗೆ ಲಾಭವಾಗುತ್ತದೆ. ಪ್ಯಾರಿಸ್ ಹವಾಮಾನ ಶೃಂಗಸಭೆಯ ಬದ್ಧತೆಯನ್ನು ಪೂರೈಸಿದ ಏಕೈಕ ಜಿ20 ದೇಶ ಭಾರತ. ನಾವು 2030ರ ನಿಗದಿತ ಗುರಿಗಿಂತ 9 ವರ್ಷಗಳ ಮೊದಲೇ ನಮ್ಮ ಶಕ್ತಿಯ ಮೂಲಗಳಲ್ಲಿ ಶೇ.40ಕ್ಕಿಂತ ಹೆಚ್ಚು ನವೀಕರಿಸಬಹುದಾದ ಇಂಧನ ಮೂಲ ಹೊಂದಿದ್ದೇವೆ ಎಂದು ಅವರು ಹಾಡಿ ಹೊಗಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು