Kornersite

Just In National

ಸತ್ತಿದ್ದಾಳೆಂದು ಗೋಳಾಡುತ್ತಿದ್ದ ಕುಟುಂಬಸ್ಥರ ಮುಂದೆ ಕಣ್ಣು ತೆರೆದ ಬಾಲಕಿ!

ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗುತ್ತಿದ್ದ ಬಾಲಕಿ ಮತ್ತೆ ಜೀವ ಪಡೆದಿದ್ದು, ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಉತ್ತರ ಪ್ರದೇಶದಲ್ಲಿನ ಸಂತೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮಗು ಕಾಲುವೆಗೆ ಬಿದ್ದಿರುವು ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಆಗ ಮಗುವನ್ನು ನೀರಿನಿಂದ ಮೇಲೆಕ್ಕೆ ತಂದಿದ್ದಾರೆ. ಆ ಸಂದರ್ಭದಲ್ಲಿ ಮನೆಯವರು ವೈದ್ಯರ ಬಳಿ ಹೋಗೋಣ ಎಂದು ಹೇಳಿದ್ದಾರೆ. ಹೀಗಾಗಿ ಪೊಲೀಸರು ಸ್ಥಳೀಯ ಪತೇರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರಿಗೆ ಹೃದಯ ಬಡಿತ ಓಡುತ್ತಿರುವುದು ಕಂಡು ಬಂದಿದೆ.

ಕೂಡಲೇ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ. ಆಗ ಬಾಲಕಿ ಕಣ್ಣು ಬಿಟ್ಟಿದ್ದಾಳೆ. ಬಾಲಕಿ ಸಾವು ಗೆದ್ದು ಬಂದಿದ್ದಕ್ಕೆ ಕುಟುಂಬಸ್ಥರು ಆನಂದಭಾಷ್ಪ ಸುರಿಸಿದರೆ, ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಾಲಕಿ ನುಂಗಿದ್ದ ನೀರನ್ನು ಹೊರಗೆ ತೆಗೆಯಲಾಗಿದ್ದು, ಬಾಲಕಿ ಮನೆಯವರೊಂದಿಗೆ ತೆರಳಿದ್ದಾಳೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ