ಬೆಂಗಳೂರಿನ ಬಾಣಸವಾಡಿಯಲ್ಲಿ ಪತ್ನಿಗೆ ಪತಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ಕೌಟುಂಬಿಕ ಕಲಹದಿಂದಾಗಿ ಈ ಘಟನೆ ನಡೆದಿದ್ದು, 28 ವರ್ಷದ ನಿಖಿತ ಪತಿಯಿಂದ ಇರಿತಕ್ಕೊಳಗಾದವರು. ಪತ್ನಿ ನಿಖಿತಾ ಹಾಗೂ ಪತಿ ದಿವಾಕರ್ ಕಳೆದ ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇತ್ತೀಚೆಗೆ ದಿವಾಕರ್ ಪ್ರತಿ ದಿನ ಕುಡಿದು ಬಂದು ಜಗಳ ಮಾಡುತ್ತಿದ್ದ. ಪತ್ನಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ದಿವಾಕರ್, ಏಕಾಏಕಿ ನಿಲ್ಲಿಸಿ ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿಖಿತಾ ಅವರನ್ನು ಬಾಣಸವಾಡಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿ, ಪ್ರಾಣ ಕಾಪಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ