Kornersite

Bengaluru Just In Karnataka Politics State

ವಿಧಾನ ಪರಿಷತ್ ಗೆ ಮೂವರು ಅವಿರೋಧ ಆಯ್ಕೆ; ಜಗದೀಶ ಶೆಟ್ಟರ್ ಸದಸ್ಯರಾಗಿ ಆಯ್ಕೆ!

ಬೆಂಗಳೂರು ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರ್ ಅವಿರೋಧವಾಗಿ ಆಯ್ಕೆಯಾಗಿದ್ದು, ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಕಣದಲ್ಲಿ ಮೂವರೇ ಅಭ್ಯರ್ಥಿಗಳು ಇದ್ದ ಕಾರಣ ಮೂವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಪರಿಷತ್ ಸದಸ್ಯರಿಗೆ ಕಾಂಗ್ರೆಸ್ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಆರ್.ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣಾ ಆಯೋಗವು ಉಪ ಚುನಾವಣೆ ಘೋಷಿಸಿತ್ತು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು