Kornersite

Just In National Politics State

UCC ಜಾರಿ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ: ಏನಿದು UCC..?

Bhopal: ಮಧ್ಯಪ್ರದೇಶದ ವಿಧಾನಸಭಾ ಚುನಾವಣೆ ನಡೆಯಲಿದ್ದು, ‘ಮೇರಾ ಬೂತ್ ಸಬ್ಸೆ ಮಜಬೂತ್’ ಅಭಿಯಾನ ಅಡಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಇಸ್ಲಾಂ ನಲ್ಲಿ ತ್ರಿವಳಿ ತಲಾಖ್ ವಿಲಕ್ಷಣವಾಗಿದ್ದರೆ ಅದನ್ನು ಮುಸ್ಲಿಂಮರೇ ಹೆಚ್ಚಿರುವ ಈಜೀಪ್ಟ್, ಇಂಡೋನೇಷಿಯಾ, ಕತಾರ್, ಜೋರ್ಡಾನ್, ಸಿರಿಯಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನದಂತಹ ದೇಶಗಳಲ್ಲಿ ಯಾಕೆ ಆಚರಣೆಯಲ್ಲಿಲ್ಲ ಎಂದು ಪ್ರಶ್ನೇ ಮಾಡಿದ್ದಾರೆ.

ಒಂದು ಕುಟುಂಬದ ವಿವಿಧ ಸದಸ್ಯರಿಗೆ ವಿಭಿನ್ನ ನಿಯಮಗಳು ಕೆಲಸ ಮಾಡುವುದಿಲ್ಲ. ಹಾಗೆಯೇ ದೇಶವು ಎರಡು ಕಾನೂನುಗಳ ಮೇಲೆ ನಡೆಸಲು ಸಾಧ್ಯವಿಲ್ಲ. ಶೇ. 90 ರಷ್ಟು ಸುನ್ನಿ ಮುಸ್ಲಿಮರಿರುವ ಈಜಿಪ್ಟ್ 80 ರಿಂದ 90 ವರ್ಷಗಳ ಹಿಂದೆ ತ್ರಿವಳಿ ತಲಾಖ್ ರದ್ದುಗೊಳಿಸಿದೆ. ತ್ರಿವಳಿ ತಲಾಖ್ ಬಗ್ಗೆ ಮಾತನಾಡುವವರು ವೋಟ್ ಬ್ಯಾಂಕ್ ಗಾಗಿ ಹೀಗೆ ಮಾಡುತ್ತಿದ್ದಾರೆ. ಆದರೆ ಅವರು ಮುಸ್ಲಿಂ ಸಹೋದರಿಯರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದರು.

ಅದಕ್ಕಾಗಿಯೇ ನಾನು ಎಲ್ಲಿಗೆ ಹೋದರೂ ಬಿಜೆಪಿ ಹಾಗೂ ಮೋದಿಯೊಂದಿಗೆ ಮುಸ್ಲಿಂ ಸಹೋದರಿಯರು ನಿಲ್ಲುತ್ತಾರೆ ಎಂದು ಹೇಳುತ್ತ ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಭಾಗವಾಗಿರುವ ಏಕರೂಪ ನಾಗರಿಕ ಸಂಹಿತೆ ಪರವಾಗಿ ನರೇಂದ್ರ ಮೋದಿ ಬ್ಯಾಟ್ ಬೀಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು