Kolar: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾಗಿ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣವನ್ನು ಬಂಗಾರಪೇಟೆಯ ಕಾಮಸಮುದ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ(20), ಎಂಬ ಹುಡುಗಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ (46) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾದ ಅದೇ ಗ್ರಾಮದ ಆಕೆಯ ಪ್ರೇಮಿ ಗಂಗಾಧರ್(24) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇವರಿಬ್ಬರೂ ಎರಡು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ವಿಷಯ ತಿಳಿದ ಕೀರ್ತಿಯ ತಂದೆ ಬುದ್ದಿವಾದ ಹೇಳಿದ್ದಾನೆ. ಆದರೆ ಮಗಳು ಮಾತ್ರ ಗಂಗಾಧರನನ್ನೇ ಮದುವೆಯಾಗುವುದಾಗಿ ಹಟ ಹಿಡಿದಿದ್ದಾಳೆ. ಇದರಿಂದ ಕೋಪಿತಗೊಂಡ ತಂದೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಇದೀಗ ತಂದೆ ಕೃಷ್ಣಮೂರ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಾತಿಯ ಹೆಸರಲ್ಲಿ ಅನ್ಯಾಯವಾಗಿ ಎರಡು ಮುಗ್ದ ಜೀವಗಳು ಬಲಿಯಾದವು ಅನ್ನೋದೇ ವಿಪರ್ಯಾಸ.