Kornersite

Bengaluru Just In Karnataka State

Karnataka Govt Jobs: ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಆಹ್ವಾನ

ಕರ್ನಾಟಕ ಸರ್ಕಾರದ ಮಹಾತ್ಮಾ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ದಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಆಹ್ವಾನಿಸಲಾಗಿದೆ. ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ಡಿಪ್ಲೋಮಾ ಪದವಿದರರು ಅರ್ಹತೆ ಹೊಂದಿದ್ದು, ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಪರಿಣಿತಿ ಹೊಂದಿರಬೇಕು. ಕೆಲವೊಮ್ಮೆ ಭಾರತ ಹಾಗೂ ಕರ್ನಾಟಕದಾದ್ಯಂತ ಪ್ರಯಾಣಿಸಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000 ವೇತನ ನೀಡಲಾಗುತ್ತದೆ. ಒಂದು ವರ್ಷದ ಗುತ್ತಿಗೆ ಅವಧಿಗೆ ನೇಮಕಾತಿ ನಡೆಯಲಿದೆ.

ಅರ್ಜಿಯನ್ನು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಭರ್ತಿ ಮಾಡಿದ ನಂತರ ಅಗತ್ಯ ದಾಖಲಾತಿಗಳನ್ನು ಇ-ಮೇಲ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕೋರಿಯರ್ ಮಾಡಬೇಕು. ಜೂಲೈ 3ಕ್ಕೂ ಮುನ್ನ ಸಲ್ಲಿಸಬೇಕು. ಇ-ಮೇಲ್ : mgiredblr@mail.com

ಅಂಚೆ ಅರ್ಜಿ ಸಲ್ಲಿಸಲು: ಮಹಾತ್ಮಾ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ದಿ, ಶ್ರೀರಾಂಪುರ ಕ್ರಾಸ್, ಜಕ್ಕೂರು, ಬೆಂಗಳೂರು-560064.

ಅರ್ಜಿಯನ್ನು ಜೂನ್ 26 ರಿಂದ ಸಲ್ಲಿಸಬಹುದು. ಕಡೆಯ ದಿನಾಂಕ ಜೂಲೈ 3. ಹೆಚ್ಚಿನ ಮಾಹಿತಿಗಾಗಿ mgired.kar.nic.in ಗೆ ಭೇಟಿ ನೀಡಿ

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ