Kornersite

Bengaluru Just In Karnataka State

ಸಾರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ: 13,415 ಹುದ್ದೆ ಶೀಘ್ರದಲ್ಲಿ ಭರ್ತಿ

ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ಇಲಾಖೆ ನಾಲ್ಕು ನಿಗಮಗಳಲ್ಲಿ 13 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಿದೆ ಇಲಾಖೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

2017ನೇ ಸಾಲಿನಿಂದ ರಸ್ತೆ ಸಾರಿಗೆ ನಿಗಮಗಳಲ್ಲಿ ನೇಮಕಗೊಳ್ಳದೇ ಇರೋ ನೇಮಾಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸಚಿವರು ಇದೀಗ ಮುಂದಾಗಿದ್ದಾರೆ. ನಿವೃತ್ತಿ, ಮರಣ ಹೀಗೆ ವಿವಿಧ ಕಾರಣಗಳಿಂದ ಖಾಲಿ ಆಗಿರುವ ಜಾಗಕ್ಕೆ ಇದೀಗ ಹೊಸದಾಗಿ ಅಪಾಯಿಂಟ್ ಮಾಡಿಕೊಳ್ಳಲಿದ್ದಾರೆ. ಹಲವು ವರ್ಷಗಳಿಂದ ಚಾಲಕ, ನಿರ್ವಾಹಕರು, ತಾಂತ್ರಿಕ ವಿಭಾಗ ಹಾಗೂ ಇನ್ನಿತರ ವಿಭಾಗಗಳಲ್ಲಿ ಸಿಬ್ಬಂದಿ ಕೊರತೆಯಿದೆ.

ಬಿಎಂಟಿಸಿಯಲ್ಲಿ 2000 ನಿರ್ವಾಹಕರನ್ನು ಹಾಗೂ 1000 ಚಾಲಕರ ನೇಮಕವಾಗಲಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 1773 ನಿರ್ವಾಹಕ ಹುದ್ದೆಗೆ ಅರ್ಜಿ ಕರೆಯಲಿದ್ದಾರೆ. ಚಾಲಕರ ಹುದ್ದೆಗೆ ಎಸ್ ಎಸ್ ಎಲ್ ಸಿ ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಹಾಗೂ ನಿರ್ವಾಹಕರ ಹುದ್ದೆಗೆ ಪಿಯುಸಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ತಾಂತ್ರಿಕ ವಿಭಾಗಕ್ಕೆ ಐಟಿಐ ಹಾಗೂ ಡಿಪ್ಲೋಮಾ ಆಗಿರಬೇಕು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ