ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಭಿಕರ ರಸ್ತೆ ಅಪಘಾತವಾಗಿದೆ. ಈ ಅಪಘಾತದಲ್ಲಿ 48 ಜನ ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್, ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಪಾದಚಾರಿಗಳ ಮೇಲೆಯೂ ಕಂಟೈನರ್ ಹರಿದಿದೆ. ಈ ಘಟನೆಯಲ್ಲಿ 48 ಜನ ಮೃತಪಟ್ಟಿದ್ದಾರೆ. ಕೆಲವರಿಗೆ ಹಲವು ಗಾಯಗಳಾಗಿವೆ.
ರಾತ್ರಿ ಪೂರ್ತಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಭಾರೀ ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಇನ್ನು ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್ ಕ್ರಾಸ್ ಸೊಸೈಟಿ ಹೇಳಿದೆ.
ರಾಜಧಾನಿ ನೈರೋಬಿಯಾ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಅಪಘಾತ ಸಂಭವಿಸಿದೆ.
ಲೊಂಡಿಯಾನಿಯಲ್ಲಿ ನಡೆದ ಅಪಘಾತದಿಂದ ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದಾರೆ.