ಮತ ಎಣಿಕೆ ಕೇಂದ್ರದ ಹೊರಗೆ ಬಾಂಬ್ ಬ್ಲಾಸ್ಟ್ ಆಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಡೈಮಂಡ್ ಹಾರ್ಬರ್ ಪಟ್ಟಣದಲ್ಲಿ ಪಂಚಾಯತ್ ಚುನಾವಣಾ ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಪೋಟವಾಗಿದೆ. ಜನರೆಲ್ಲ ಇರೋ ಸ್ಥಳದಲ್ಲೇ ಈ ಸ್ಪೋಟವಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ವೇಳೆ ದುಷ್ಕರ್ಮಿಗಳು ಬಾಂಬ್ ಎಸೆದಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತನಿಖೆಯ ನಂತರ ಮತ್ತಷ್ಟು ಮಾಹಿತಿ ದೊರೆಯಬೇಕಿದೆ.