Kornersite

Crime Just In National

ಜನರ ಗುಂಪಿನ ಮೇಲೆಯೇ ಕಾರು ಹಾಯಿಸಿದ ಚಾಲಕ; 9 ಜನ ಬಲಿ, 13 ಜನರ ಸ್ಥಿತಿ ಗಂಭೀರ!

ಹಮದಾಬಾದ್ : ಕಾರು ಚಾಲಕನ ಹುಚ್ಚಾಟಕ್ಕೆ 9 ಜನ ಸಾವನ್ನಪ್ಪಿ, 13 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಹಮದಾಬಾದ್‌ನಲ್ಲಿ (Ahmedabad) ನಡೆದಿದೆ.

ಸರ್ಖೇಜ್-ಗಾಂಧಿನಗರ ಹೆದ್ದಾರಿಯ ಇಸ್ಕಾನ್ ದೇವಸ್ಥಾನದ (ISKCON Temple) ಹತ್ತಿರದ ಮೇಲ್ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆ ಮಧ್ಯರಾತ್ರಿ ಸುಮಾರು 1 ಗಂಟೆಯ ವೇಳೆಗೆ ಜರುಗಿದೆ. ಪರಿಣಾಮ 9 ಜನ ಸಾವನ್ನಪ್ಪಿದ್ದಾರೆ. ಈ ಗುರುವಾರ ಸಂಭವಿಸಿದ ಅಪಘಾತದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಹಿಟ್‌ ಅಂಡ್‌ ರನ್‌ (Hit and Run) ಅಡಿ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

ಇಸ್ಕಾನ್ ಫ್ಲೈಓವರ್‌ನಲ್ಲಿ ಮಹೀಂದ್ರ ಥಾರ್ ವಾಹನವು ಡಂಪರ್ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ನಿಂತು ಅಪಘಾತಗೊಂಡಿದ್ದ ವಾಹನಗಳನ್ನು ನೋಡುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಜಾಗ್ವಾರ್ ಕಾರು ನಿಂತಿದ್ದವರ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಪೊಲೀಸರು ಸೇರಿದಂತೆ 9 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 12 ಜನರನ್ನು ಆಸ್ಪತ್ರೆಗೆ ದಾಖಲಿಸಲು ತೆರಲಾಗುತ್ತಿತ್ತು. ಈ ಸಂದರ್ಭದಲ್ಲಿ ಮಂದಿ ಸಾವನ್ನಪ್ಪಿದ್ದಾರೆ.

ಆಸ್ಪತ್ರೆಗೆ ಕರೆತರಲಾಗಿದ್ದ ಒಟ್ಟು 12 ಜನರಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಇನ್ನುಳಿದ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೋಲಾ ಸಿವಿಲ್ ಆಸ್ಪತ್ರೆಯ ವೈದ್ಯಾಧಿಕಾರಿ ಕೃಪಾ ಪಟೇಲ್ ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ