ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ನಾಳೆಯೇ ಕೊನೆಯ ದಿನವಾಗಿದೆ.
ಒಟ್ಟು 1558 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. MTS- 1198 ಹುದ್ದೆಗಳು, ಹವಾಲ್ದಾರ್ (CBIC – CBN)- 360 ಹುದ್ದೆಗಳು ಸೇರಿದಂತೆ ಒಟ್ಟು 1558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.
MTS ಮತ್ತು ಹವಾಲ್ದಾರ್ (CBN) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಹವಾಲ್ದಾರ್ (CBIC) ಹುದ್ದೆಗಳಿಗೆ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜುಲೈ 21ರೊಳಗಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಎಸ್ಎಸ್ಸಿಯ ಅಧಿಕೃತ ವೆಬ್ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು.