Kornersite

Just In Lifestyle State

ಸಾಫ್ಟ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ನಾಳೆಯೇ ಕೊನೆಯ ದಿನವಾಗಿದೆ.

ಒಟ್ಟು 1558 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. MTS- 1198 ಹುದ್ದೆಗಳು, ಹವಾಲ್ದಾರ್ (CBIC – CBN)- 360 ಹುದ್ದೆಗಳು ಸೇರಿದಂತೆ ಒಟ್ಟು 1558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.
MTS ಮತ್ತು ಹವಾಲ್ದಾರ್‌ (CBN) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಹವಾಲ್ದಾರ್ (CBIC) ಹುದ್ದೆಗಳಿಗೆ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜುಲೈ 21ರೊಳಗಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಎಸ್ಎಸ್ಸಿಯ ಅಧಿಕೃತ ವೆಬ್ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ