ಗ್ರಾಮ ಪಂಚಾಯ್ತಿ ಸರ್ಕಾರಿ ಹುದ್ದೆಗಳಿಗೆ ಸೇರಬೇಕೆನ್ನುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-1, ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-2, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರದಿಂದ ಅಂತಿಮ ಆದೇಶ ಹೊರ ಬಿದ್ದಿದೆ. ಸರ್ಕಾರವು ಈ ಆದೇಶವನ್ನು ಜುಲೈ 15 ರಂದು ಹೊರಡಿಸಿದ್ದು, ಮುಂದಿನ ಆಗಷ್ಟ್ ತಿಂಗಳ ಅಂತ್ಯದೊಳಗೆ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೃಂದದ ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಹುದ್ದೆಗಳು ಖಾಲಿ ಇದ್ದು, ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಅಧಿಸೂಚನೆ ಸಾಧ್ಯತೆ ಇದೆ. ಇನ್ನುಳಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ : 660, ಪಂಚಾಯತ್ ಕಾರ್ಯದರ್ಶಿ ಗ್ರೇಡ್-1: 604, ಪಂಚಾಯತ್ ಕಾರ್ಯದರ್ಶಿ ಗ್ರೇಡ್-2: 729 ಸೇರಿದಂತೆ ಎಸ್‌ಡಿಎ : 345 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಎಸ್ ಡಿಎ, ಕಾರ್ಯದರ್ಶಿ ಹುದ್ದೆಗಳಿಗೆ ಪಿಯುಸಿ ಪಾಸ್ ಮಾಡಿರಬೇಕು. ಅರ್ಜಿ ಸಲ್ಲಿಸುವ ಕೊನೆ ದಿನಾಂಕದೊಳಗೆ ಪಾಸ್ ಮಾಡಿದ್ದರೆ ಮಾತ್ರ ಅರ್ಜಿಗೆ ಅವಕಾಶ ಇರುತ್ತದೆ.