Kornersite

Crime Just In State

ಮನೆಯಿಂದ ಹೊರಗೆ ಬಂದಿದ್ದ ರೌಡಿಶೀಟರ್ ಹತ್ಯೆ!

ಶಿವಮೊಗ್ಗ: ಮಧ್ಯರಾತ್ರಿ ಸಂದರ್ಭದಲ್ಲಿ ರೌಡಿಶೀಟರ್ ಒಬ್ಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಜಿಲ್ಲೆಯ ಭದ್ರಾವತಿ(Bhadravati) ಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರೌಡಿಶೀಟರ್ ಮುಜಾಯಿದ್ದೀನ್(32) ಕೊಲೆಯಾಗಿರುವ ವ್ಯಕ್ತಿ. ಜುಲೈ 20ರಂದು ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಈ ಘಟನೆ ನಡೆದಿದೆ. ಮೃತ ರೌಡಿಶೀಟರ್ ಮನೆಯಿಂದ ಹೊರಗೆ ಬಂದಿದ್ದ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಸ್ಥಳಕ್ಕೆ ಪೇಪರ್ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ