Kornersite

Bengaluru Just In Karnataka State

ಕರ್ನಾಟಕದ ಹಲವೆಡೆ ಪ್ರವಾಹ: ಕ್ಷೇಮವಾಗಿರು ಕರ್ನಾಟಕ!

ಮಹಾರಾಷ್ಟ್ರ ಪಶ್ಚಿಮಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕರ್ನಾಟಕದ ಹಲವೆಡೆ ಪ್ರವಾಹ ಉಂಟಾಗುತ್ತಿದೆ. ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಹಿರಣ್ಯಕೇಶಿ, ಘಟಪ್ರಭಾ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಆತಂಕ ಹೆಚ್ಚಾಗುತ್ತಿದೆ.

ಕೃಷ್ಣಾ ನದಿಗೆ 92 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ದೂದ್‌ಗಂಗಾ ನದಿಗೆ 20 ಸಾವಿರ ಕ್ಯುಸೆಕ್‌ನಷ್ಟು ಒಳಹರಿವು ಹೆಚ್ಚಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 14 ಸೇತುವೆಗಳು ಮುಳುಗಡೆಯಾಗಿವೆ. ನದಿ ತೀರಕ್ಕೆ ಜನರು ಹೋಗದಂತೆ ಸದಲಗಾ ಪೊಲೀಸರು ಸದಲಗಾ ಪಟ್ಟಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ದೂಧ್‌ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೋಜ್ – ಕಾರದಗಾ, ಮಲಿಕವಾಡ – ದತ್ತವಾಡ ಸೇತುವೆ, ವೇದಗಂಗಾಗೆ ಅಡ್ಡಲಾಗಿ ನಿರ್ಮಿಸಿರುವ ಭೋಜವಾಡಿ – ನಿಪ್ಪಾಣಿ ಸೇರಿದಂತೆ. ಕುನ್ನೂರು-ಬಾರವಾಡ, ಸಿದ್ನಾಳ್-ಅಕ್ಕೋಳ, ಭೋಜ್-ಕುನ್ನೂರು, ಭೀವಶಿ-ಜತ್ರಾಟ ಸೇತುವೆಗಳು ಮುಳುಗಡೆಯಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಾಂಜರಿ – ಬಾವನಸೌದತ್ತಿ ಸೇತುವೆ, ಕಾಗವಾಡ ತಾ. ಮಂಗಾವತಿ – ರಾಜಾಪುರ ಸೇತುವೆ, ಹಿರಣ್ಯಕೇಶಿಗೆ ನಿರ್ಮಿಸಿರುವ ಅರ್ಜುನವಾಡಿ – ಕೋಚರಿ ಸೇತುವೆ, ಅರ್ಜುನವಾಡಿ – ಕುರ್ಣಿ, ಕುರ್ಣಿ – ಕೋಚರಿ ಸೇತುವೆ ಮುಳುಗಡೆಯಾಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

ಹುಬ್ಬಳ್ಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಉಣಕಲ್ ಕೆರೆ ತುಂಬಿ ಕೋಡಿ ಹರಿಯುತ್ತಿದ್ದು ಜನರಲ್ಲಿ ಆತಂಕ ಎದುರಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ