ರೇಡಿಯೊ ಸಂವಹನ ವಿಸ್ತರಿಸಲು ಮುಂದಾಗಿರುವ ಕೇಂದ್ರ ಸರ್ಕಾರ 284 ನಗರಗಳಲ್ಲಿ 808 ಎಫ್ಎಂ ರೇಡಿಯೊ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ.
ಹೀಗಾಗಿ ಸದ್ಯದಲ್ಲಿಯೇ ಇ-ಹರಾಜು ಪ್ರಕ್ರಿಯೆ ನಡೆಸಲಾಗಿವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಪ್ರಾದೇಶಿಕ ಸಮುದಾಯ ರೇಡಿಯೊ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 26 ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿನ 113 ನಗರಗಳಲ್ಲಿ 388 FM ರೇಡಿಯೋ ಕೇಂದ್ರಗಳನ್ನು ಹೊಂದಿದೆ. ರೇಡಿಯೋ ಸೇವೆಗಳನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಚಿಂತಿಸಿದ್ದು, 284 ನಗರಗಳಲ್ಲಿ 808 ಚಾನೆಲ್ಗಳ ಮೂರನೇ ಬ್ಯಾಚ್ ಇ-ಹರಾಜನ್ನು ಯೋಜಿಸುತ್ತಿದೆ ಎಂದು ಠಾಕೂರ್ ಮಾಹಿತಿ ನೀಡಿದ್ದಾರೆ.
ದೂರದ, ಬುಡಕಟ್ಟು, ಎಲ್ಡಬ್ಲ್ಯೂಇ ಪೀಡಿತ ಮತ್ತು ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಂಟು ಲಕ್ಷಕ್ಕೂ ಹೆಚ್ಚು ಡಿಡಿ ಉಚಿತ ಡಿಶ್ ಸೆಟ್-ಟಾಪ್ ಬಾಕ್ಸ್ಗಳನ್ನು ಉಚಿತವಾಗಿ ವಿತರಿಸುವ ಗುರಿಯನ್ನು ಈ ಯೋಜನೆ ಮೂಲಕ ಹೊಂದಲಾಗಿದೆ ಎಂದು ಹೇಳಿದ್ದಾರೆ.