Kornersite

Just In National State

Good News: ಇನ್ಮುಂದೆ ಪ್ರತಿ ಸಿಲಿಂಡರ್ ಗೂ ಸಿಗುತ್ತೆ ಸಬ್ಸಿಡಿ

ಗೃಹ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ಇನ್ಮುಂದೆ ಸಬ್ಸಿಡಿ ಸಿಗಲಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಫಲಾನುಭವಿಗಳ ಬ್ಯಾಂಕ್ ಅಕೌಂಟ್ ಗೆ ನೇರವಾಗಿ ಹಣ ಬರಲಿದೆ. ಭಾರತದಲ್ಲಿ ವಿಶೇಷವಾಗಿ ಬಡವರಿಗೆ ಸಹಾಯಧನ ಯೋಜನೆಯನ್ನು ಪ್ರಾರಂಭಿಸುವ ಕ್ರಮವನ್ನು ಪ್ರಧಾನಿ ಉಜ್ವಲ್ ಯೋಜನೆ ಎಂದು ಘೋಷಣೆ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಕಳೆದ ವರ್ಷ ಮೇ ದಿಂದ ಪ್ರತಿ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ನೀಡಲಾಗುವುದು. ವರ್ಷಕ್ಕೆ 12 ಸಿಲಿಂಡರ್ ಗಳಿಗೆ ಈ ಸಬ್ಸಿಡಿ ಸಿಗಲಿದೆ. ಈ ಯೋಜನೆಯಲ್ಲಿ 9 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದಾರೆ ಎಂದು ಸರ್ಕಾರ ನಿರ್ಧಾರ ಮಾಡಿದೆ.

ಪ್ರಧಾನಮಂತ್ರಿ ಉಜ್ವಲ 2.0 ಯೋಜನೆ ಅಡಿಯಲ್ಲಿ ಬಡವರು ವರ್ಷಕ್ಕೆ 12 ಗ್ಯಾಸ್ ಸಿಲಿಂಡರ್ ಗಳ ಮೇಲೆ 2400 ರೂಪಾಯಿ ಸಬ್ಸಿಡಿ ಪಡೆಯಬಹುದಾಗಿದೆ. ಈ ಯೋಜನೆಗೆ ಭಾಜೀನರಾಗಲು ವಿವಿಧ ನಿಯಮಗಳಿವೆ. ಅರ್ಜಿದಾರರು ಮಹಿಳೆಯಾಗಿರಬೇಕು ಮತ್ತು 18 ವರ್ಷದಿಂದ ಹೆಚ್ಚಿನ ವಯಸ್ಸಿರಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವು ದಾಖಲೆಗಳನ್ನು ಸಲ್ಲಿಸಬೇಕು. ಐಡಿ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ ಹೀಗೆ ಕೆಲವೊಂದು ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ನಿಮ್ಮ ವಿವರ ಸಲ್ಲಿಸಬಹುದಾಗಿದೆ.

http://pmuy.gov.in/ujjwala2.html

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ