Kornersite

Just In Karnataka State

ಸೌಜನ್ಯ ಕೊಲೆ ಪ್ರಕರಣ: ಆರೋಪಕ್ಕೆ ಬೇಸರ ವ್ಯಕ್ತ ಪಡಿಸಿದ ವೀರೇಂದ್ರ ಹೆಗ್ಗಡೆ

ಸುಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಹಾಗೂ ಹೆಗ್ಗಡೆ ಅವರ ಕುಟುಂಬದ ಮೇಲೆ ಬಂದಿರೋ ಆರೋಪಕ್ಕೆ ವೀರೇಂದ್ರ ಹೆಗ್ಗಡೆ ಅವರು ಬೇಸರ ವ್ಯಕ್ತ ಪಡಿಸಿದ್ದಾರೆ.

2012 ರಲ್ಲಿ ನಡೆದ ಸೌಜನ್ಯ ಕೊಲೆಗೆ ನ್ಯಾಯ ದೊರಕಿಸಿಕೊಡಲು ನಮ್ಮ ಕುಟುಂಬ ಒತ್ತಾಯ ಮಾಡಿತ್ತು. ಉನ್ನತ ಮಟ್ಟದ ತನಿಖೆಗೂ ಕೂಡ ಆಗ್ರಹ ಮಾಡಿದ್ದೇವು. ನಂತರ ಸಿಬಿಐ ತನಿಖೆ ನಡಿಸಿ ಆರೋಪಿಯನ್ನು ಜೈಲಿಗೆ ಅಟ್ಟಿತ್ತು. ಆದ್ರೆ ಇದೀಗ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇದೀಗ ಶ್ರೀ ಕ್ಶೇತ್ರದ ಮೇಲೆ ಹಾಗೂ ನಮ್ಮ ಕುಟುಂಬದ ಮೇಲೆ ತಪ್ಪು ಆರೋಪ ಮಾಡಲಾಗುತ್ತಿದೆ ಪತ್ರಿಕಾಗೋಷ್ಟಿ ನಡೆಸಿ ವೀರೇಂದ್ರ ಹೆಗ್ಗಡೆಯವರು ಬೇಸರ ವ್ಯಕ್ತಪಡಿಸಿದರು.

ಸೌಜನ್ಯ ಸಾವಿಗೆ ಸಂಬಂಧ ಪಟ್ಟಂತೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯ ಕೂಡ ಮಾಡಿದ್ದೇನೆ. ಶ್ರೀ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ, ಆಪಾದನೆ, ವದಂತಿಯ ಬಗ್ಗೆ ಭಕ್ತರು ಕಿವಿಗೊಡಬೇಡಿ ಎಂದು ಡಾ. ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿಕೊಂಡರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ