ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೇ ಇದೆ. ನಿಲ್ತಾನೇ ಇಲ್ಲ. ಜನರ ಗುಂಪೊಂದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ಅವರ ಬಳಿ ಇದ್ದ ಶಸ್ತ್ರಾಸ್ತ್ರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಘಟನೆ ನಡೆದಿದ್ದು ಮಣಿಪುರದ ಬಿಷ್ಣುಪುರದಲ್ಲಿ. ಪೊಲೀಸರು ಹೇಳೋ ಪ್ರಕಾರ ಪುರುಷರು ಹಾಗೂ ಮಹಿಳೆಯರು ಇದ್ದ ಗುಂಪು ಅದು. ಬಿಷ್ಣುಪುರ ಜಿಲ್ಲೆಯಲ್ಲಿ ಕೀರೆನ್ ಫಾಬಿ ಪೊಲೀಸ್ ಔಟ್ ಪೋಸ್ಟ್ ಮತ್ತು ತಂಗಲವಾಯ್ ಪೊಲೀಸ್ ಔಟ್ ಪೋಸ್ಟ್ ಅನ್ನು ದೋಚಿದ್ದಾರೆ.
ಕೌಟ್ರುಕ್, ಹರಾಥೆಲ್ ಹಾಗೂ ಸೆಂಜಮ್ ಚಿರಾಂಗ್ ಪ್ರದೇಶಗಳಲ್ಲಿ ಸಶಸ್ತ್ರ ದಾಳಿಕೋರರು ಹಾಗೂ ಭದ್ರತಾ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ವೇಳೆ ಒಬ್ಬ ಭದ್ರತಾ ಸಿಬ್ಬಂಧಿ ಮೃತಪಟ್ಟಿದ್ದಾರೆ. ಅಲ್ಲದೇ ಇಬ್ಬರು ಗಾಯಗೊಂಡಿದ್ದಾರೆ.
ದಾಳಿಕೋರರ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್ ಗಳನ್ನು ಹಾರಿಸಿದ್ದಾರೆ. ಇದರಲ್ಲಿ ಸುಮಾರು 25 ಜನರಿಗೆ ಚಿಕ್ಕ್ ಪುಟ್ಟ ಗಾಯಗಳಾಗಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಲ್ಲಂಘನೆಗೆ ಸಂಬಂಧ ಪಟ್ಟ ಸುಮಾರು 1047 ಜನರನ್ನು ಈಗಾಗಲೇ ಬಂಧಿಸಿದ್ದಾರೆ.