ಸ್ಯಾಂಡಲ್ ವುಡ್ ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ಬ್ಯಾಂಕಾಕ್ ಗೆ ಹೋಗಿದ್ದರು. ನಿನ್ನೆ ಶಾಪಿಂಗ್ ಮುಗಿಸಿ ರೂಂಗೆ ಹೋಗುವಾಗ ಈ ಘಟನೆ ನಡೆದಿದೆ. ಹೃದಯಾಘಾತಕ್ಕೆ ಒಳಗಾಗಿದ್ದ ಸ್ಪಂದನಾ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯಲ್ಲೇ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
2007ರಲ್ಲಿ ವಿಜಯ್ ರಾಘವೇಂದ್ರ ಅವರು ಸ್ಪಂದನಾರನ್ನ ಪ್ರೀತಿಸಿ ಮದುವೆಯಾಗಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿ ಸ್ಪಂದನಾ. ದುರಾದೃಷ್ಟ ಅಂದರೆ ಇವರಿಬ್ಬರ ಮದುವೆಯ 16 ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನ ಮಾತ್ರ ಬಾಕಿ ಇತ್ತು.