Kornersite

Just In Karnataka State

ಅಚ್ಚರಿ! 9 ಬಾರಿ ಹಾವಿನಿಂದ ಕಚ್ಚಿಸಿಕೊಂಡರೂ ಬದುಕುಳಿದ ಬಾಲಕ

ಹಾವು ಎಂದರೆ ಎಲ್ಲರಿಗೂ ಭಯ. ಆದರೆ, ಇಲ್ಲೊಬ್ಬ ಬಾಲಕನಿಗೆ ಬರೋಬ್ಬರಿ 9 ಬಾರಿ ಹಾವು ಕಚ್ಚಿದೆ. ಆದರೂ ಆತ, ಆರೋಗ್ಯವಾಗಿಯೇ ಇದ್ದಾನೆ ಎನ್ನಲಾಗಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್ ಗೆ ಜುಲೈ 3ರಂದು ಮನೆಯ ಮುಂದೆ ಆಡುವಾಗ ಹಾವು (Snake Bite) ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಎಂದು ಬಾಲಕ ಹೇಳಿದ್ದಕ್ಕೆ ಆತನನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ನಂತರ ನಾಲ್ಕೈದು ದಿನಗಳ ಮಧ್ಯೆದಲ್ಲೇಯ ಈ ಬಾಲಕನಿಗೆ ನಿರಂತರವಾಗಿ 9 ಬಾರಿ ಹಾವು ಕಚ್ಚಿದೆ ಎನ್ನಲಾಗಿದೆ.

9 ಬಾರಿ ಹಾವು ಕಚ್ಚಿರುವ ಗುರುತುಗಳು ಕೂಡ ಆತನ ಕಾಲಿನಲ್ಲಿವೆ. 5 ಬಾರಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೆ, 4 ಬಾರಿ ಸ್ಥಳೀಯ ನಾಟಿ ವೈದ್ಯರಿಂದ ಔಷಧಿಯನ್ನು ಪೋಷಕರು ಕೊಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಾವು ಪ್ರಜ್ವಲ್ ಬಿಟ್ಟು ಯಾರ ಕಣ್ಣಿಗೂ ಸಹ ಕಂಡಿಲ್ಲ. ಹೀಗಾಗಿ ಆತನ ಮನೆ ಸುತ್ತ ಹಾವು ಹುಡುಕುವುದೇ ದೊಡ್ಡ ಕೆಲಸವಾಗಿದೆ. ಈ ಬಾಲಕನ ಮೇಲೆ ಮಾತ್ರ ಹಾವು ಕಚ್ಚಿರುವುದಾಗಿ ಹೇಳುತ್ತಿರುವುದು ಸಹ ಹಲವು ಅನುಮಾನಕ್ಕೂ ಸಹ ಎಡೆಮಾಡಿಕೊಟ್ಟಿದೆ. ಈತನ ಪೋಷಕರು ಸಿಕ್ಕ ಸಿಕ್ಕ ದೇವರುಗಳ ಮೊರೆ ಹೋಗುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ