ರಾಜ್ಯದಲ್ಲಿ ಕೆಲವು ದಿನಗಳಿಂದ ಕೈ ಕೊಟ್ಟಿದ್ದ ಮಳೆರಾಯ ಇಂದಿನಿಂದ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಮತ್ತು ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ ತಿಂಗಳ ಮಳೆಯ ಅಂಕಿ ಅಂಶಗಳನ್ನು ಗಮನಿಸುವುದಾದರೆ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಶೇ. 74ರಷ್ಟು ಮಳೆ ಕೊರತೆಯಾಗಿದೆ.