ಸೆ. 9 ಹಾಗೂ 10ರಂದು ರಾಷ್ಟ್ರ ರಾಜಧಾನಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ದೆಹಲಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಮತ್ತು ಇತರ ಘಟಕಗಳು ಸೇರಿದಂತೆ ಭದ್ರತಾ ಸಂಸ್ಥೆಗಳಿಂದ ಭದ್ರತೆ ಕಲ್ಪಿಸಲಾಗಿದೆ.
ದೋಷರಹಿತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಈ ಬಾರಿ ಕೃತಕ ಬುದ್ಧಿಮತ್ತೆ (ಎಐ) ಮಾಡ್ಯೂಲ್‍ಗಳನ್ನು ಬಳಸಲಾಗುತ್ತಿದೆ.
ಇದರಿಂದಾಗಿ ಭದ್ರತಾ ಸಿಬ್ಬಂದಿ ಸುಧಾರಿತ ಎಐ ಆಧಾರಿತ ಕ್ಯಾಮೆರಾಗಳು ಮತ್ತು ಸಾಫ್ಟ್ ವೇರ್ ಅಲಾರಂಗಳನ್ನು ಬಳಸಿಕೊಂಡು ಅನುಮಾನಾಸ್ಪದ ಚಟುವಟಿಕೆಗಳನ್ನು ಗುರುತಿಸಿ ಫಿಲ್ಟರ್ ಮಾಡಲು ಸಾಧ್ಯವಾಗುತ್ತದೆ.
ಜಿ 20 ಶೃಂಗಸಭೆಯ ಸಮಯದಲ್ಲಿ ಹೆಚ್ಚುವರಿ ಭದ್ರತೆಗಾಗಿ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್‍ಜಿ) ಕಮಾಂಡೋಗಳು ಮತ್ತು ಸೇನಾ ಸ್ನೈಪರ್.ಗಳನ್ನು ಎತ್ತರದ ಕಟ್ಟಡಗಳಲ್ಲಿ ನಿಯೋಜಿಸಲಾಗಿದೆ. ವಿಐಪಿ ಭದ್ರತೆಯಲ್ಲಿ ಅನುಭವ ಹೊಂದಿರುವ ಸುಮಾರು 1 ಸಾವಿರ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ “ವಿಶೇಷ 50” ತಂಡವನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿದ್ಧಪಡಿಸಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್, ಚೀನಾ ಪ್ರಧಾನಿ ಕ್ಸಿ ಜಿನ್‍ಪಿಂಗ್, ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ವಿದೇಶಿ ಗಣ್ಯರು ರಾಷ್ಟ್ರ ರಾಜಧಾನಿಯ ಉನ್ನತ ಮಟ್ಟದ ಹೋಟೆಲ್‍ಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ.