Kornersite

Just In Karnataka Politics State

ನಮ್ಮ ರಾಜ್ಯ ದಿವಾಳಿಯಾಗಿಲ್ಲ ಮೋದಿಯವರೇ; ಸಿಎಂ

ಮೈಸೂರು : ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhakshmi Scheme) ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನೂರು ದಿನಗಳ ಸರ್ಕಾರದ ಸಾಧನೆಯ ಕೈಪಿಡಿ ಹೊರ ತರಲಾಗಿದೆ.

ಗೃಹಲಕ್ಷ್ಮಿ ಯೋಜನೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಇದಕ್ಕೂ ಮುನ್ನ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈಗ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ನಾವು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಇವುಗಳ ಈಡೇರಿಕೆಗೆ ಸಾಧ್ಯವೇ ಇಲ್ಲ ಎಂದು ವಿರೋಧಿಗಳು ಹೇಳಿದ್ದರು. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತೆ ಎಂದು ಹೇಳಿದ್ದರು. ನಾವಿಂದು ನಾಲ್ಕು ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ. ಯುವನಿಧಿ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ಬರುತ್ತದೆ. ಆದರೆ, ರಾಜ್ಯ ದಿವಾಳಿಯಾಗಿಲ್ಲ. ಯಾವ ಅಭಿವೃದ್ಧಿ ಕಾರ್ಯ ನಿಂತಿಲ್ಲ ಎಂದು ಹೇಳಿದರು.
ಮೋದಿ ಅವರೇ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಅನುದಾನ ನೀಡಲಾಗಿದೆ.

ರಂಟಿಗಳನ್ನೂ ಈಡೇರಿಸುತ್ತಿದ್ದೇವೆ. ಕಾಂಗ್ರೆಸ್ ಯಾವತ್ತಿಗೂ ಬಡವರು, ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಯುವಕರು, ಕಾರ್ಮಿಕರು ಹಾಗೂ ಎಲ್ಲ ನೊಂದ ಜನರ ಪರವಾಗಿ ಸರ್ಕಾರ ಇದೆ ಎಂದು ತಿರುಗೇಟು ನೀಡಿದ್ದಾರೆ. ಈಗ ಸರ್ಕಾರ ಬಂದು ನೂರು ದಿನ ಕಳೆದಿವೆ. ಸಾಧನೆಗಳ ಕೈಪಿಡಿಯನ್ನು ಹೊರತರಲಾಗಿದೆ. ನಮ್ಮ ಸಾಧನೆ, ಕರ್ತವ್ಯ ಹಾಗೂ ಮುಂದಿನ ಯೋಜನೆಗಳನ್ನು ಜನರಿಗೆ ತಿಳಿಸುವುದು ಸರ್ಕಾರದ ಕರ್ತವ್ಯವೂ ಹೌದು. ಹಿಂದಿನ ಯಾವುದೇ ಸರ್ಕಾರಗಳು ನೂರು ದಿನಗಳಲ್ಲಿ ಕೊಟ್ಟ ಮಾತನ್ನು ಈಡೇರಿಸಿರಲಿಲ್ಲ. ನಾವು ಈಡೇರಿಸಿದ್ದೇವೆ. ಅದನ್ನು ಜನರಿಗೆ ತಿಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು