ಯುವಕನನ್ನು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲಿಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.
ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ವ್ಯಕ್ತಿ. ಯುವಕನ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದಿದ್ದ ಮೂವರು ಯುವಕರು ನಾಗರಾಜ್ ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಹತ್ಯೆ ನಡೆದ ನಂತರ ಅವರೆಲ್ಲ ಬೇರೆ ಬೇರೆ ಕಡೆ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.