Kornersite

Crime Just In Karnataka State

ಕಾಫಿ ನಾಡಿನಲ್ಲಿ ಮಾಂಸ ತಿನ್ನುವವರು ಎಚ್ಚರ!

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾಂಸ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಹೊರ ಬಂದಿದ್ದು, ಮಾಂಸಾಹಾರಿ ಹೊಟೇಲ್ ನಲ್ಲಿ ಕುರಿಯ ಬದಲಾಗಿ ದನದ ಮಾಂಸ ಬಳಸುತ್ತಿರುವುದು ವರದಿಯಾಗಿದೆ.

ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಸೀಜ್ ಮಾಡಿದ್ದಾರೆ. ಚಿಕ್ಕಮಗಳೂರಿನ ಐ.ಜಿ. ರಸ್ತೆಯಲ್ಲಿನ ಬೆಂಗಳೂರು ಹೋಟೆಲ್ ಹಾಗೂ ಎವರೆಸ್ಟ್ ಹೋಟೆಲ್‍ನಲ್ಲಿ ದನದ ಮಾಂಸ ಬಳಸುತ್ತಿದ್ದ ಸಂದರ್ಭದಲ್ಲಿಯೇ ದಾಳಿ ನಡೆಸಿದ ಪೊಲೀಸರು ಸೀಜ್ ಮಾಡಿ, ಇಬ್ಬರನ್ನು ಬಂಧಿಸಿದ್ದಾರೆ.
ಎರಡು ಹೋಟೆಲ್‍ನಲ್ಲಿ ಊಟ ಮಾಡಿದ ಸ್ಥಳಿಯರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ನಗರ ಪೊಲೀಸರು ಐದು ಕೆಜಿ ದನದ ಮಾಂಸ ಹಾಗೂ ಅದರಿಂದ ತಯಾರಿಸಿದ್ದ ಬಿರಿಯಾನಿಯನ್ನೂ ವಶಕ್ಕೆ ಪಡೆದಿದ್ದಾರೆ.

ಈ ಪ್ರದೇಶದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುತ್ತಾರೆ. ಹೋಟೆಲ್, ರೆಸಾರ್ಟ್, ಹೋಂಸ್ಟೇ ಮಾಲೀಕರು ಜನರನ್ನು ಆಕರ್ಷಿಸಲು ದೊಡ್ಡ ಸಾಹಸ ಮಾಡುತ್ತಿರುತ್ತಾರೆ. ಆದರೆ, ಹಣ ಮಾಡುವ ದುರುದ್ಧೇಶದಿಂದ ಕೆಲ ಹೋಟೆಲ್‍ಗಳಲ್ಲಿ ಕುರಿ ಮಾಂಸದ ಬದಲು ದನದ ಮಾಂಸದ ಬಿರಿಯಾನಿ ಸೇರಿದಂತೆ ನಾನ್ ವೆಜ್‌ ಅಡುಗೆ ಮಾಡುತ್ತಿದ್ದಾರೆ. ಕುರಿ ಮಟನ್ ಕೆ.ಜಿ.ಗೆ 700-800 ರೂ. ಇದೆ. ಆದರೆ ದನದ ಮಾಂಸ ಕೆಜಿಗೆ 200-300 ರೂ. ಸಿಗುತ್ತದೆ. ಹೀಗಾಗಿ ಕೆಲವರು ಕಡಿಮೆ ದರದ ಮಾಂಸ ತಂದು, ಗ್ರಾಹಕರಿಗೆ ಮೋಸ ಮಾಡುತ್ತಿದ್ದಾರೆ. ಸದ್ಯ ಈ ವಿಷಯ ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ