ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೂರು ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.
ಬೆಂಕಿಗೆ ಆಹುತಿಯಾದ ಗುಡಿಸಲುಗಳು ಗುಜ್ಜರ್ ಸಮುದಾಯಕ್ಕೆ ಸೇರಿದ್ದು, ನಜ್ಮಾ ಬೇಗಂ(25) ಹಾಗೂ ಅಸ್ಮಾ ಬಾನೋ(6), ಇಕ್ರಾ ಬಾನೋ(2) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದ ಮಹಿಳೆಯ ಪತಿ ಇಬ್ರಾಹಿಂ ಹಾಗೂ ಅತ್ತೆ ಮಿರ್ಜಾ ಬೇಗಂ ಅವರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.