Kornersite

International Just In Karnataka State

ಕನ್ನಡಿಗರಿಗೆ ಹೆಮ್ಮೆಯ ಕ್ಷಣ; ಯುನೆಸ್ಕೋ ಪಟ್ಟಿಗೆ ಬೇಲೂರು, ಹಳೇಬೀಡು, ಸೋಮನಾಥಪುರ!

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ದೇವಾಲಯಗಳು ಸ್ಥಾನ ಪಡೆದಿದ್ದು, ಕನ್ನಡಿಗರು ಹೆಮ್ಮೆ ಪಡುವಂತಾಗಿದೆ.

ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಮತ್ತು ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನ, ಮೈಸೂರು ಜಿಲ್ಲೆಯ ಸೋಮನಾಥಪುರದಲ್ಲಿನ ಕೇಶವ ದೇವಸ್ಥಾನಗಳು ಸ್ಥಾನ ಪಡೆದಿವೆ.

ವಿಶ್ವ ಪರಂಪರೆ ತಾಣಗಳ ಪಟ್ಟಿಗೆ 2022-23ರಲ್ಲಿ ಸೇರಿಸುವ ಕುರಿತು ಕೇಂದ್ರದ ಸಂಸ್ಕೃತಿ ಮತ್ತು ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಸಚಿವಾಲಯ ಭಾರತದಿಂದ ನಾಮನಿರ್ದೇಶನ ಮಾಡಿ ಕಳುಹಿಸಿತ್ತು. ಕೇಂದ್ರದ ಸಂಸ್ಕೃತಿ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಈಶಾನ್ಯ ಪ್ರದೇಶ ಅಭಿವೃದ್ಧಿ ಖಾತೆಯ ರಾಜ್ಯ ಸಚಿವ ಜಿ.ಕಿಷನ್ ರೆಡ್ಡಿ ಈ ವಿಚಾರವನ್ನು ಅಂದಿನ ಟ್ವಿಟ್ಟರ್‌ (ಪ್ರಸ್ತುತ ಎಕ್ಸ್) ನಲ್ಲಿ ತಿಳಿಸಿದ್ದರು.

12-13 ನೇ ಶತಮಾನದಲ್ಲಿ ನಿರ್ಮಿಸಲಾದ ಹೊಯ್ಸಳರ ಶೈಲಿಯ ಶಿಲ್ಪಕಲಾ ಶೈಲಿಯ ದೇಗುಲಗಳು, ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ದೇವಾಲಯಗಳು ಈಗ ಪಟ್ಟಿಯಲ್ಲಿ ಸೇರಿವೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ