ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ (Fraud case) ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ತಂಡದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು (Halashree) ಸಿಸಿಬಿ ಒಡಿಸ್ಸಾದಲ್ಲಿ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಆರೋಪಿ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ. ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡ ಕಳುಹಿಸಲಾಗಿತ್ತು. ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಸದ್ಯ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿ ಬಂಧಿಸಲಾಗಿದೆ.
ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಹೀಗಗಿ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ. ಸ್ವಾಮೀಜಿಗಾಗಿ ಪ್ರತ್ಯೇಕ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು ಎನ್ನಲಾಗಿದೆ.