Kornersite

International Just In National

ಭಾರತದ ವಿರುದ್ಧ ಪಿತೂರಿ ಆರಂಭಿಸಿದ ಕೆನಡಾ!

ಕೆನಡಾ, ಭಾರತದ ವಿರುದ್ಧ ಗಂಭೀರ ಆರೋಪ ಮಾಡುತ್ತಿದೆ. ಖಲಿಸ್ತಾನಿ (Khalistani) ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ (India) ಕೈವಾಡವಿದೆ ಎಂದು ಆರೋಪ ಮಾಡಿದೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau), ಹೌಸ್ ಆಫ್ ಕಾಮನ್ಸ್ ಉದ್ದೇಶಿಸಿ ಮಾತನಾಡಿ, ಜೂನ್‍ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಪ್ರಬಲ ಆರೋಪಗಳು ಇವೆ ಎಂದು ಆರೋಪಿಸಿದ್ದಾರೆ.

ಆರೋಪ ಕೇಳಿ ಬಂದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಮುಖ್ಯಸ್ಥರನ್ನು ಉಚ್ಛಾಟಿಸಿದೆ. ಕೆನಡಾದ ಈ ರಾಜತಾಂತ್ರಿಕ ಕ್ರಮವು ಒಟ್ಟಾವಾ ಮತ್ತು ದೆಹಲಿ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಂತಾಗಿದೆ. ಕೆನಡಾದ (Canada) ವಿದೇಶಾಂಗ ಸಚಿವೆ ಮೆಲಾನಿ ಜೋಲೀ ಪ್ರತಿಕ್ರಿಯಿಸಿ, ಟ್ರುಡೊ ಸರ್ಕಾರವು ತಕ್ಷಣದ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಜೂನ್ 18 ರಂದು ಹರ್ದೀಪ್ ಸಿಂಗ್ ನಿಜ್ಜರ್ ಮೇಲೆ ಗುಂಡು ಹಾರಿಸಲಾಗಿತ್ತು. ಭಾರತವು ಈತನನ್ನು ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಘೋಷಿಸಿತು ಎಂಬುವುದು ಉಲ್ಲೇಖ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು